ವಿದೇಶಿ ವಿದ್ಯಾಭ್ಯಾಸ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Published on

ಹಾವೇರಿ: ಮಾನ್ಯತೆ ಪಡೆದ ಯಾವುದೇ ವಿದೇಶ ವಿಶ್ವವಿದ್ಯಾಲಯ ಹಾಗೂ ಭಾರತ ದೇಶದ ಪ್ರತಿಷ್ಠಿತ ಐಐಟಿ, ಐಐಎಂ ಹಾಗೂ ಐಎಸ್‌ಸಿ ಸಂಸ್ಥೆಗಳಲ್ಲಿ ಪ್ರಸಕ್ತ 2024-25ನೇ ಸಾಲಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸಕ್ಕೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾಭ್ಯಾಸ ಸಾಲಸೌಲಭ್ಯಕ್ಕೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿರಬೇಕು. ಈ ಯೋಜನೆಯಡಿ ನಿಗಮಕ್ಕೆ ಆಸ್ತಿಯ(ಕಟ್ಟಡ/ಜಮೀನು) ಅಡಮಾನದ ಮೇಲೆ ಸಂಪೂರ್ಣ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ 20 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು.
ಆಸಕ್ತ ವಿದ್ಯಾರ್ಥಿಗಳು ವೆಬ್‌ಸೈಟ್ http://kmdconline.karnataka.gov.in ನಲ್ಲಿ ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಿದ ಹಾರ್ಡ್ ಕಾಪಿಯನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net