ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ

Bus
Published on

ಹಾವೇರಿ: ಮಾ.25ರಿಂದ ಏಪ್ರಿಲ್ 6ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಎಸ್ಸೆಸ್ಸೆಲ್ಸಿ ಅಂತಿಮ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಬೇರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ಶಿಕ್ಷಣ ಇಲಾಖೆಯ ಕೋರಿಕೆಯ ಮೇರೆಗೆ ಈ ವ್ಯವಸ್ಥೆ ಮಾಡಲಾಗಿದೆ.
ಈ ಅವಧಿಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ವಾಕರಸಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net