ಪಿಯುಸಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಉಚಿತ

Bus
Published on

ಹಾವೇರಿ: ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಮಾ.1ರಿಂದ ಮಾ.20ರವರೆಗೆ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮಾ.21ರಿಂದ ಏ.4ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಆಯಾ ವಿದ್ಯಾರ್ಥಿಗಳ ವಿದ್ಯಾಸಂಸ್ಥೆ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆ ಆಗಿರುವುದರಿಂದ ವಿದ್ಯಾರ್ಥಿಗಳ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ದ್ವಿತೀಯ ಪಿ.ಯು.ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ದ್ವಿತೀಯ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net