ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಜೂ.27ರಂದು

Published on

ಹಾವೇರಿ: ದಾವಣಗೆರೆಯ ವಿಶ್ವರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಜೂ.27ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಡಾ.ಮಹಂತೇಶ ಎ.ಸಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ಕಳೆದ ಎರಡು ವರ್ಷಗಳಲ್ಲಿ ಸುಮಾರು 1,500 ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಿದೆ. ಕ್ಯಾನ್ಸರ್ ರೋಗದ ಲಕ್ಷಘೆಗಳನ್ನು ಕಂಡ ತಕ್ಷಣವೇ ಚಿಕಿತ್ಸೆ ಪಡೆದರೆ ರೋಗದಿಂದ ಗುಣಪಡಿಸಬಹುದು. ರೋಗಿಗಳಲ್ಲಿ ಜಾಗೃತಿ ಮೂಡಿಸುವುದು ಹಾಗೂ ಚಿಕಿತ್ಸೆ ನೀಡುವ ಹಿನ್ನೆಲೆಯಲ್ಲಿ ಈ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ರೋಗಿಗಳು ಈ ಶಿಬಿರದ ಸದುಪಯೋಗ ಪಡೆಯಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ರಾಘವೇಂದ್ರ ಡಿ.ಆರ್, ಸಂತೋಷಕುಮಾರ ಜಿ.ಆರ್, ಮಂಜುನಾಥ ಜಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net