ಹಾವೇರಿ: ದೇವಗಿರಿ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿಯಲ್ಲಿ ಜಿಲ್ಲೆಯ ನಿರೂದ್ಯೋಗಿ ಯುವಕ ಮತ್ತು ಯುವತಿಯರಿಗೆ ಸೆಪ್ಟೆಂಬರ್‌ನಲ್ಲಿ 10 ದಿನಗಳ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿ ಆಯೋಜಿಸಲಾಗಿದೆ.
ಪಾನಿಪುರಿ, ಸೇವಪುರಿ, ದಹಿ ಪುರಿ, ಏಗ್‌ರೈಸ್, ನೂಡಲ್ಸ್, ಗೋಬಿ ಮಂಚೂರಿ, ಪಾವಬಾಜಿ, ವಡಾ ಪಾವ್, ಬ್ರೇಡ್, ಕೇಕ್ ಇತ್ಯಾದಿ ತಯಾರಿಕೆ ಪ್ರಾಯೋಗಿಕ ನೀಡಲಾಗುವುದು. ಜಿಲ್ಲೆಯ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಮಾತ್ರ ಅವಕಾಶವಿದೆ. ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರಲಿದೆ. 18ರಿಂದ 45 ವರ್ಷದ ಅಭ್ಯರ್ಥಿಗಳು ಜಾತಿ ಮತ್ತು ಆದಾಯ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ವಿಜಯ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಡಿ.ಸಿ ಆಫೀಸ್ ಕಟ್ಟಡದ ಹಿಂಭಾಗ, ದೇವಗಿರಿ, ಹಾವೇರಿ ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.