ಹಾವೇರಿ: ನಗರದ ಗಾಂಧಿ ವೃತ್ತದಲ್ಲಿ ಗಾಂಧಿ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾಲಾರ್ಪಣೆ ಮಾಡಿ, ಸದ್ಭಾವನಾ ನಡಿಗೆಗೆ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ನಗರ ಸಭೆ ಸದಸ್ಯರು, ಎಸ್‌ಪಿ ಯಶೋದಾ ವಂಟಗೋಡಿ, ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಲ್, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್., ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಇತರರು ಗಾಂಧಿ ವೃತ್ತದಿಂದ ಗಾಂಧಿ ಭವನದವರೆಗೆ ಸದ್ಭಾವನಾ ನಡಿಗೆಯಲ್ಲಿ ಭಾಗವಹಿಸಿದ್ದರು.