

ಹಾವೇರಿ: ಬುಧವಾರ ಬೆಳಗ್ಗೆ ನಗರದ ಗಾಂಧಿ ವೃತ್ತದಲ್ಲಿ ಗಾಂಧಿ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾಲಾರ್ಪಣೆ ಮಾಡಿ, ಸದ್ಭಾವನಾ ನಡಿಗೆಗೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಗಾಂಧಿ ವೇಷಧಾರಿ ರಾಮಣ್ಣ, ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಗಾಂಧಿ ವೃತ್ತದಿಂದ ಗಾಂಧಿ ಭವನದವರೆಗೆ ಸದ್ಭಾವನಾ ನಡಿಗೆಯಲ್ಲಿ ಭಾಗವಹಿಸಿದ್ದರು. ಅಧಿಕಾರಿಗಳು ಹಾಗೂ ಸಿಬ್ಬಂದಿ ಖಾದಿ ಜುಬ್ಬಾ-ಪೈಜಾಮ್, ಟೋಪಿ ಧರಿಸಿದ್ದರು. ಮಹಿಳಾ ಅಧಿಕಾರಿಗಳು ಖಾದಿ ಸೀರೆ ತೊಟ್ಟು ಗಮನ ಸೆಳದರು.