ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್‌ಬಹದ್ದೂರ ಶಾಸ್ತ್ರಿಜಿಯವರ ಜಯಂತಿ ಕಾರ್ಯಕ್ರಮ ಅ.2ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಜರುಗಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದು, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಇತರರು ಭಾಗವಹಿಸುವರು. ಬೆಂಗಳೂರು ಸಾಧನಾ ಅಕಾಡೆಮಿ ಉಪನ್ಯಾಸಕ ಮೆಹಬೂಬ ನಾಯ್ಕಡಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್‌ಬಹದ್ದೂರ ಶಾಸ್ತ್ರೀಜಿ ಅವರ ಜೀವನ ದರ್ಶನ ಕುರಿತು ಉಪನ್ಯಾಸ ನೀಡುವರು.
ವಿವಿಧ ಕಾರ್ಯಕ್ರಮ:
ಗಾಂಧೀ ಜಯಂತಿ ಅಂಗವಾಗಿ ಸಾಮೂಹಿಕ ಶ್ರಮದಾನ, ಸದ್ಭಾವನಾ ನಡಿಗೆ, ಗಾಂಧಿ ಪ್ರಿಯ ಗೀತ ಗಾಯನ, ಸರ್ವಧರ್ಮ ಪ್ರಾರ್ಥನೆ, ಬಾಪೂಜಿ ಪ್ರಬಂಧ ಸ್ಪರ್ಧೆ, ವಿಜೇತರಿಗೆ ಬಹುಮಾನ ವಿತರಣೆ, ವಿಚಾರ ಗೋಷ್ಠಿ ಹಾಗೂ ಕಿರುಚಿತ್ರ ಪ್ರದರ್ಶನ ಜರುಗಲಿದೆ.