ಗಾಂಧಿಪುರ ಕಾಲೇಜ್ ಸಾಂಸ್ಕೃತಿಕ ಚಟುವಟಿಕೆಗೆ ಚಾಲನೆ

oplus_131072
oplus_131072
Published on

ಹಾವೇರಿ: ತಾಲೂಕಿನ ಗಾಂಧಿಪುರ ಗ್ರಾಮದ ಸರ್ಕಾರಿ ಪ್ರಥಮ ಕಾಲೇಜ್ ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಸೋಮವಾರ ಸಾಂಸ್ಕೃತಿಕ ವೇದಿಕೆ, ಕ್ರೀಡಾ ವಿಭಾಗ, ರಾಷ್ಟೀಯ ಸೇವಾ ಯೋಜನೆ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೆಡ್‌ಕ್ರಾಸ್ ಚಟುವಟಿಕೆ ಕಾರ್ಯಕ್ರಮಕ್ಕೆ ಶಾಸಕ ಹಾಗೂ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಮಕ್ಕಳು ವಿದ್ಯಾಭ್ಯಾಸದ ಜತೆಗೆ ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದು ಕಿವಿಮಾತು ಹೇಳಿದರು.
ಅತಿಥಿಯಾಗಿ ಪಾಲ್ಗೊಂಡಿದ್ದ ಹಾವೇರಿ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವೆ ಡಾ.ವಿಜಯಲಕ್ಷ್ಮೀ ತಿರ್ಲಾಪುರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಒಳ್ಳೆಯ ನಾಯಕತ್ವದ ಗುಣಗಳು ಮತ್ತು ಸಂಸ್ಕಾರಯುತ ಶಿಕ್ಷಣ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇದರ ಜತೆಗೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಮಹತ್ವವನ್ನು ಅರಿಯಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಡಾ.ಗುರುಲಿಂಗ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯ ಹವ್ಯಾಸವನ್ನು ಬೆಳೆಸಿಕೊಳ್ಳುವುದರ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ತಂದೆ ತಾಯಿ ಮತ್ತು ಗುರುಗಳಿಗೆ ಋಣಿಯಾಗಿರಬೇಕು ಎಂದರು.
ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ.ಡಿ.ಟಿ.ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗೆಣ್ಣಿ, ಎಂ.ಎಂ.ಮೈದೂರ, ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಇತರರು ಉಪಸ್ಥಿತರಿದ್ದರು. ಜಯಶ್ರೀ ಎಲ್. ಸ್ವಾಗತಿಸಿದರು. ಹನುಮಂತ ಕೆ.ಎಂ. ನಿರೂಪಿಸಿದರು, ತಿಪ್ಪೇಸ್ವಾಮಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net