

ಹಾವೇರಿ: ತಾಲೂಕಿನ ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಶುಕ್ರವಾರ ಗಾಂಧಿಪುರದಲ್ಲಿ ಕಡಲೆ ಕಾಯಿ ಮಾರಾಟ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟಿಸಿದರು.
ಸೇವಾ ಕಾಯಂಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಅತಿಥಿ ಉಪನ್ಯಾಸಕರ ಸಂಘದಿದಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿ 30 ದಿನ ಪೂರೈಸಿದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಅತಿಥಿ ಉಪನ್ಯಾಸಕರು ಕಡಲೆ ಕಾಯಿ ಮಾರುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು.