

ಹಾವೇರಿ: ಗಣೇಶ ಹಬ್ಬದ ಆಚರಣೆ ವೇಳೆ ದೊಡ್ಡ ಪ್ರಮಾಣದ ಧ್ವನಿವರ್ಧಕ (ಡಿಜೆ) ಬಳಕೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ನಗರದ ವಿವಿಧ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹಾಗೂ ಎಸ್‌ಪಿ ಯಶೋಧಾ ವಂಟಗೋಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲಾದ್ಯಂತ ಸಾರ್ವಜನಿಕ ಗಣೇಶ ಹಬ್ಬವನ್ನು ಹಲವು ವರ್ಷಗಳಿಂದ ಅತ್ಯಂತ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಈ ವರ್ಷವು ಸಹಿತ ಸಾರ್ವಜನಿಕ ಗಣೇಶ ಹಬ್ಬವನ್ನು ಸಾವಿರಾರು ಜನರೊಂದಿಗೆ ಶಾಂತಿ ಸುವ್ಯವಸ್ಥೆ ಹಾಗೂ ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ. ಹಾಗಾಗಿ ಜಿಲ್ಲಾದ್ಯಂತ ಆ.27ರಿಂದ ಗಣೇಶ ಪ್ರತಿಷ್ಠಾಪನೆ ಮಾಡಿ, ನಂತರ ವಿಸರ್ಜನೆ ಮಾಡುವವರೆಗೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 10ರವರೆಗೆ ಡಿಜೆ ಬಳಸಲು ಅನುಮತಿ ನೀಡಬೇಕೆಂದು ಒತ್ತಾಯಿಸಿದರು.
ಪ್ರಮುಖರಾದ ಸಿದ್ದರಾಜ ಕಲಕೋಟಿ, ಸಂತೋಷ ಆಲದಕಟ್ಟಿ, ಶಿವರಾಜ ನವಲೆ, ಕಿರಣಕುಮಾರ ಕೋಣನವರ, ವರುಣ ಆನವಟ್ಟಿ, ಸುನೀಲ ರಾಯ್ಕರ್, ದೀಪಕ ಮಡಿವಾಳರ, ರಾಘವೇಂದ್ರ ಕಾಂಬಳೆ, ಯಲ್ಲಪ್ಪ ಸುಗೂರು, ನಿಖಿಲ ಸಂಗಂ, ಸಂತೋಷ ಗಾಯಕವಾಡ, ರುದ್ರೇಶ ಶಿಶುವಿನಹಳ್ಳಿ, ಶಿವಾನಂದ ಕಮ್ಮಾರ, ಅನಿಲ, ವಿನಾಯಕ ಪವಾರ, ವಿವಿಧ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.