ಗ್ಯಾಂಗ್ ರೇಪ್ ಪ್ರಕರಣ, ಮತ್ತೋರ್ವ ಅರೆಸ್ಟ್

Published on

ಹಾವೇರಿ: ಹಾನಗಲ್ಲ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಮಂಗಳವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಅಕ್ಕಿಆಲೂರಿನ ಮಫೀದ್ ಓಣಿಕೇರಿಯನ್ನು ಮಂಗಳವಾರ ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಮತ್ತೋರ್ವ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತ ಗುಣಮುಖ ಆದ ನಂತರ ವಶಕ್ಕೆ ಪಡೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net