ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಟ್ರಸ್ಟ್‌ನಿಂದ ಹಾವೇರಿಯಲ್ಲಿ 14ರಂದು ಪ್ರಶಸ್ತಿ ಪ್ರದಾನ ಸಮಾರಂಭ

2 HVR 5
Published on

ಹಾವೇರಿ: ಆಗಸ್ಟ್ 14ರಂದು ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಟ್ರಸ್ಟ್‌ನಿಂದ ಹಾವೇರಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾರಂಭದಲ್ಲಿ ಮಹಿಳೆಯರಿಗೆ ‘ಅಕ್ಕ’ ‘ಅರಳು ಮೊಗ್ಗು’ ಹಾಗೂ ‘ಜಾನಪದ ಶ್ರೀ’ ಪ್ರಶಸ್ತಿ ನೀಡಲಾಗುವುದು. ರಾಜ್ಯಮಟ್ಟದ ಆಯ್ಕೆ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ. ಕಾರ್ಯಕ್ರಮದಲ್ಲಿ ಐದು ಸ್ತ್ರೀಶಕ್ತಿ ಸಂಘಗಳಿಗೆ, ಐವರು ರೈತರು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿರುವ ಐವರು ವಿದ್ಯಾರ್ಥಿನಿಯರಿಗೆ ನಗದು ಬಹುಮಾನ ನೀಡಲಾಗುವುದು. ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಲಿದ್ದಾರೆ. ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ, ಇತರರು ಭಾಗವಹಿಸಲಿದ್ದಾರೆ.

ನಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರ ಶತಮಾನೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಂದು ಸಾವಿರ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಲಾಗುವುದು. ಪ್ರತಿ ತಾಲೂಕಿಗೆ ಕನಿಷ್ಠ 200 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಲಾಗುವುದು. ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುವುದು. ನಿಮ್ಮೆಲ್ಲರ ಸಹಕಾರ ಬೇಕು ಎಂದು ಬೊಮ್ಮಾಯಿ ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net