ಗಂಗವ್ವ ಸೋಮಪ್ಪ ಬೊಮ್ಮಾಯಿ ಟ್ರಸ್ಟ್‌ನಿಂದ ಪುಸ್ತಕ ಲೋಕಾರ್ಪಣೆ ಇಂದು

Gangavva Bommai trust
Published on

ಹಾವೇರಿ: ಹುಬ್ಬಳ್ಳಿಯ ಕುಸುಗಲ್ಲ ರಸ್ತೆಯ ಶ್ರೀನಿವಾಸ ಗಾರ್ಡನ್‌ನಲ್ಲಿ ಸೆ.28ರಂದು ಬೆಳಗ್ಗೆ 11 ಗಂಟೆಗೆ ಶ್ರೀಮತಿ ಗಂಗವ್ವ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಪ್ರಶಸ್ತಿ ಪ್ರಧಾನ ಹಾಗೂ ಗ್ರಂಥ ಲೋಕಾರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಸಾಹಿತಿಗಳಾದ ರಮೇಶ ಕಲ್ಲನಗೌಡರ, ಡಾ.ಹೇಮಾ ಪಟ್ಟಣಶೆಟ್ಟಿ, ಹೊರೆಯಾಲ ದೊರೆಸ್ವಾಮಿ, ನೇಹಾ ರಾಮಾಪುರ, ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net