ಹಾವೇರಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಹೋಬಳಿ ಮಟ್ಟದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಾ.1ರಂದು ಬೆಳಗ್ಗೆ 10 ಗಂಟೆಗೆ ಗ್ಯಾರಂಟಿ ಯೋಜನೆಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ತಹಸೀಲ್ದಾರ್ ನಾಗರಾಜ ಎನ್.ಜೆ. ಪ್ರಕಟಣೆಯಲ್ಲಿ ಕೋರಿದ್ದಾರೆ.