ಸರ್ಕಾರಿ ನೌಕರರ ಸಂಘದಿಂದ ಸಚಿವರಿಗೆ ಮನವಿ ಜ.26ರಂದು

Published on

ಹಾವೇರಿ: ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಜ.26ರಂದು ಬೆಳಗ್ಗೆ 10 ಗಂಟೆಗೆ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಗುವುದು. ಜಿಲ್ಲೆಯ ಸರ್ಕಾರಿ ನೌಕರರು, ವೃಂದ ಸಂಘಗಳ ಪದಾಧಿಕಾರಿಗಳು ಭಾಗವಹಿಸುವರು ಎಂದು ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net