ತಜ್ಞ ವೈದ್ಯರ ಹುದ್ದೆಗಳಿಗೆ ಗುತ್ತಿಗೆ ಆಧಾರದ ನೇಮಕಾತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2023-24ನೇ ಸಾಲಿನ ಆರ್.ಒ.ಪಿ. ಪ್ರಕಾರ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮಾಸಿಕ ವೇತನ ಆಧಾರದಲ್ಲಿ ಹಾಗೂ ಎಂ.ಬಿ.ಬಿ.ಎಸ್. ವೈದ್ಯರನ್ನು ಮಾಸಿಕ ವೇತನ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತಜ್ಞ ವೈದ್ಯರ 12 ಹಾಗೂ ಎಂ.ಬಿ.ಬಿ.ಎಸ್. ವೈದ್ಯರ 32 ಹುದ್ದೆಗಳು ಖಾಲಿ ಇರುತ್ತವೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪೂರ್ಣ ಪ್ರಮಾಣದ ಹಕ್ಕನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಕಾಯ್ದಿರಿಸಿಕೊಂಡಿದೆ. ವಯೋಮಿತಿಯನ್ನು ರಾಜ್ಯ ಮಟ್ಟದ ಮಾರ್ಗಸೂಚಿ ಪ್ರಕಾರ ನಿಗದಿಪಡಿಸಲಾಗಿದೆ.
ಜು.10ರಿಂದ ಪ್ರತಿದಿನ ಈ ಹುದ್ದೆಗಳು ಭರ್ತಿಯಾಗುವವರೆಗೂ ಕಚೇರಿ ವೇಳೆಯಲ್ಲಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣ ನಂ.19 ಬಿ ಬ್ಲಾಕ್, ಜಿಲ್ಲಾಡಳಿತ ಭವನ, ದೇವಗಿರಿ ಹಾವೇರಿ ಈ ವಿಳಾಸಕ್ಕೆ ಅಗತ್ಯ ಮೂಲ ದಾಖಲಾತಿಗಳೊಂದಿಗೆ ಒಂದು ಸೆಟ್ ಝರಾಕ್ಸ್ ಪ್ರತಿಯೊಂದಿಗೆ ಎರಡು ಭಾವಚಿತ್ರಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು. ಬಳಿಕ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ಜಿಲ್ಲಾಡಳಿತ ಭವನ ದೇವಗಿರಿ (ಆರೋಗ್ಯ ಇಲಾಖೆ) ಹಾವೇರಿ ಕಚೇರಿ ಇಲ್ಲಿಗೆ ಸಂಪರ್ಕಿಸಬಹುದು ಹಾಗೂ ಕಚೇರಿ ಸೂಚನಾ ಫಲಕ ವಿಕ್ಷೀಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಘವೇಂದ್ರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net