ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

SSLC Exams
Published on

ಹಾವೇರಿ: ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಹಾವೇರಿ ಹಾಗೂ ಬೆಂಗಳೂರು ವತಿಯಿಂದ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವೀತಿಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.90ರಷ್ಟು ಹೆಚ್ಚು ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿನಂತಿಸಿದೆ. ಸಂಘ ನಿಗದಿಪಡಿಸಿರುವ ನಮೂನೆಯಲ್ಲಿ ಇಲಾಖೆ ಮುಖ್ಯಸ್ಥರಿಂದ ಮೇಲುರುಜು ಪಡೆದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ ತಾಲೂಕು ಶಾಖೆಗಳ ಅಧ್ಯಕ್ಷರ ಸಹಿಯೊಂದಿಗೆ ಧೃಢೀಕರಿಸಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು. ನಿಗಮ ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿಕ ವಿದ್ಯಾಸಂಸ್ಥೆಯ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ, ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್‌ಲೋಡ್ ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ. ಆಸಕ್ತರು ಈ ಲಿಂಕ್ https://bit.ly/ksgea2024pp ಮೂಲಕ ಅರ್ಜಿ ಸಲ್ಲಿಸಿ. ಮಾಹಿತಿಗೆ 080-22354784ಗೆ ಸಂಪರ್ಕಿಸಿ ಎಂದು ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net