ಹಾವೇರಿ: ರಾಜ್ಯ ಸರ್ಕಾರಿ ನೌಕರರ ಸಂಘ ಹಾವೇರಿ ಜಿಲ್ಲಾ ಘಟಕದ ವತಿಯಿಂದ ಜು.20ರಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಗುರು ಭವನದಲ್ಲಿ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ವಾರ್ಷಿಕ ಸಭೆ ಹಾಗೂ ನವೀಕರಣ ಕೊಠಡಿಗಳ ಲೋಕಾರ್ಪಣೆ ಸಮಾರಂಭ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದು, ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಕೊಠಡಿ ಲೋಕಾರ್ಪಣೆ ಮಾಡಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಬಸವರಾಜ ಬೊಮ್ಮಾಯಿ, ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹಾಗೂ ಇತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.