ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಜು.12ರಂದು ಧಾರವಾಡ ವಿದ್ಯಾಗಿರಿಯ ಜೆಎಸ್‌ಎಸ್ ಕಾಲೇಜ್‌ನಲ್ಲಿ

Published on

ಹಾವೇರಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜು.12ರಂದು ಸಂಜೆ 4 ಗಂಟೆಗೆ ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2025 ಸಮಾರಂಭ ಧಾರವಾಡ ವಿದ್ಯಾಗಿರಿಯ ಜೆಎಸ್‌ಎಸ್ ಕಾಲೇಜ್‌ನಲ್ಲಿ ನಡೆಯಲಿದೆ.

ಜಿಲ್ಲೆಯ ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕ.ರಾ.ಸ.ನೌ.ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಮಲ್ಲೇಶ ಕರಿಗಾರ ಪ್ರಕಟಣೆ ಮೂಲಕ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net