ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ 10ರಿಂದ

Published on

ಹಾವೇರಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಮಾ.10 ಹಾಗೂ 11ರಂದು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.

ಫುಟ್‌ಬಾಲ್, ವಾಲಿಬಾಲ್, ಹಾಕಿ, ಕಬಡ್ಡಿ, ಟೇಬಲ್ ಟೆನ್ನಿಸ್, ಟೆನ್ನಿಸ್, ಷಟಲ್ ಬ್ಯಾಡ್ಮಿಂಟನ್, ಕೇರಂ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜರುಗಲಿವೆ.

ದೈಹಿಕ ಶಿಕ್ಷಕರು, ಪೊಲೀಸರು, ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆಗಳ ಬ್ಯಾಡ್ಜ್ ನಂಬರ್ ಸಿಬ್ಬಂದಿ, ಕ್ರೀಡಾ ಮೀಸಲಾತಿಯಡಿ ಆಯ್ಕೆಯಾದ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಉಳಿದಂತೆ ಎಲ್ಲ ಲಿಪಿಕ ಸಿಬ್ಬಂದಿ ಹಾಗೂ ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net