ಮೂಲ ದಾಖಲಾತಿಗಳ ಪರಿಶೀಲನೆ ಜ.7ರಂದು; ಗ್ರಾಮ ಆಡಳಿತಾಧಿಕಾರಿ ನೇರ ನೇಮಕಾತಿ ಪ್ರಕ್ರಿಯೆ

Published on

ಹಾವೇರಿ: ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 34 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ, ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಆಯ್ಕೆಪಟ್ಟಿಯನ್ನು 1:3 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗಾಗಿ ಪ್ರಾವಿಷನಲ್ ವೆರಿಫಿಕೇಶನ್ ಲಿಸ್ಟ್ ಅನ್ನು ಡಿ.21ರಂದು ಹಾವೇರಿ ಜಿಲ್ಲಾ ವೆಬ್‌ಸೈಟ್ ಛ್ಟಿಜಿ.್ಞಜ್ಚಿ.ಜ್ಞಿ ನಲ್ಲಿ ಪ್ರಕಟಿಸಲಾಗಿದೆ.

ಈ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಗಾಗಿ ಜ.7ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಾಜರಾಗಬೇಕು.

ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಬೆಂಗಳೂರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾವೇರಿ ಜಿಲ್ಲಾಧಿಕಾರಿ ಕಚೇರಿಯ ಆಡಳಿತ ಶಾಖೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಅಧ್ಯಕ್ಷ ಡಾ.ವಿಜಯಮಹಾಂತೇಶ ದಾನಮ್ಮನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net