ಹಾವೇರಿ: ಜಿಲ್ಲೆಯ ಎರಡು ತಾಲೂಕುಗಳ ಮೂರು ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹಾವೇರಿ ತಾಲೂಕು ಕಳ್ಳಿಹಾಳ, ಹಾನಗಲ್ಲ ತಾಲೂಕು ಮಾರನಬೀಡ ಹಾಗೂ ಸಂವಸಗಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ https//www.karnatakaone.gov.in/public/GramOneFranchiseeTermskn ಫೆ.15ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್. ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆಯ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.