ಶ್ರೀ ದ್ಯಾಮವ್ವ ದೇವಿ ಪುನರ್ ಪ್ರತಿಷ್ಠಾಪನೆ

5 Dyamavva Devi 2
Published on

ಹಾವೇರಿ: ಇತಿಹಾಸ ಪ್ರಸಿದ್ಧ ಗ್ರಾಮದೇವತೆ ಶ್ರೀ ದ್ಯಾಮವ್ವ ದೇವಿ ಮೂರ್ತಿಯ ಪುನರ್ ಪ್ರತಿಷ್ಠಾಪನೆ ಕಾರ್ಯ ಮಂಗಳವಾರ ವಿಧಿವತ್ತಾಗಿ ಜರುಗಿತು.
ಐದು ವರ್ಷದ ಬಳಿಕ ಹಮ್ಮಿಕೊಂಡಿದ್ದ ಗ್ರಾಮದೇವತೆ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಿಯನ್ನು ದೇವಸ್ಥಾನದಿಂದ ಕರೆದೊಯ್ದು ಚೌತಮನಿಕಟ್ಟಿಯಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಜಾತ್ರೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ದೇಗುಲದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30ರವರೆಗೆ ಚಂಡಿಕಾ ಹೋಮ ಮಾಡುವ ಮೂಲಕ ದೇವಿಯನ್ನು ಪುನರ್ ಪ್ರತಿಷ್ಠಾಪಿಸಲಾಯಿತು. ನಂತರ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಯಿತು ಎಂದು ದೇವಸ್ಥಾನ ಸಮಿತಿ ಕಾರ್ಯದರ್ಶಿ ಅಶೋಕ ಮುದಗಲ್ಲ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net