

ಹಾವೇರಿ: ಗುತ್ತಲ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೇ 20ರಂದು ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗುತ್ತಲ, ಹೊಸರಿತ್ತಿ ಮತ್ತು ನೀರಲಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.