ಹಾವೇರಿ: ಕರ್ತವ್ಯಲೋಪ ಹಾಗೂ ಅನಧಿಕೃತ ಗೈರು ಹಾಜರಿ ಹಿನ್ನೆಲೆಯಲ್ಲಿ ಗುತ್ತಲ ಪಟ್ಟಣ ಪಂಚಾಯಿತಿ ಕರ ವಸೂಲಿಗಾರ ನಂಜುಂಡಪ್ಪ ಎಫ್. ಗಂಗಮ್ಮನವರ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.
ನಂಜುಂಡಪ್ಪ ಸಾರ್ವಜನಿಕರಿಂದ ತೆರಿಗೆ ಹಣ ವಸೂಲಿ ಮಾಡಿ ಪಟ್ಟಣ ಪಂಚಾಯಿತಿಗೆ ಪಾವತಿಸದೇ ಹಣ ದುರುಪಯೋಗಪಡಿಸಿಕೊಂಡ ಬಗ್ಗೆ ಸಾರ್ವಜನಿಕರು ಪಟ್ಟಣ ಪಂಚಾಯಿತಿಗೆ ದೂರು ಸಲ್ಲಿಸಿದ್ದರು. ಸಾರ್ವಜನಿಕರ ಹಣ ದುರುಪಯೋಗ ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಹಾಗೂ ಮಾರ್ಚ್ 21, 2024ರಿಂದ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿ ಸಾರ್ವಜನಿಕ ಕೆಲಸಕ್ಕೆ ತೊಂದರೆ ಉಂಟು ಮಾಡಿದ್ದ ದೋಷಾರೋಪಣಾ ಪಟ್ಟಿಯನ್ನು ಜಾರಿ ಮಾಡಲಾಗಿತ್ತು. ದೋಷಾರೋಪಣ ಪಟ್ಟಿ ಸ್ವೀಕರಿಸಿದರೂ ಈವರೆಗೆ ಸಮಂಜಸವಾದ ಉತ್ತರ ನೀಡಿಲ್ಲ. ಹಾಗಾಗಿ, ಅಮಾನತು ಮಾಡಿ ಡಿಸಿ ಆದೇಶಿಸಿದ್ದಾರೆ.