ಹಾದಿ ಬಸವಣ್ಣ ದೇವರ ಕಾರ್ತಿಕೋತ್ಸವ

22 HVR 3
Published on

ಹಾವೇರಿ: ನಗರದ ಹಾನಗಲ್ಲ ರಸ್ತೆಯ ಹಾದಿ ಬಸವಣ್ಣ ದೇವರ ಕಾರ್ತಿಕೋತ್ಸವ ಇತ್ತೀಚೆಗೆ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಬಸವಣ್ಣ ದೇವರಿಗೆ ಅಭಿಷೇಕ ಮತ್ತು ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಲಾ ತಂಡದವರು, ವಿದ್ಯಾರ್ಥಿಗಳು ಮತ್ತು ಚಿಕ್ಕ ಮಕ್ಕಳು ನೃತ್ಯ, ಸಂಗೀತ ಮತ್ತು ಹಾಸ್ಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಯಿತು.
ಹಾದಿ ಬಸವಣ್ಣ ನಗರ, ಪಟ್ಟದಸ್ವಾಮಿ ನಗರ ಬಡಾವಣೆಯ ನಾಗರಿಕರ ಸಮಿತಿ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ವಿವಿಧ ಬಡಾವಣೆಗಳ ನಾಗರಿಕರು, ವರ್ತಕರು, ಗಣ್ಯರು ಕಾರ್ತಿಕೋತ್ಸವದಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net