ಡಾ.ಫ.ಗು.ಹಳಕಟ್ಟಿ ಜನ್ಮದಿನ ನಾಳೆ

Published on

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಸವೇಶ್ವರ ಬಿ.ಇಡಿ. ಕಾಲೇಜ್ ಸಹಯೋಗದಲ್ಲಿ ಜು.2ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನ-ವಚನ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಚಿವ ಶಿವಾನಂದ ಪಾಟೀಲ ಉದ್ಘಾಟಿಸುವರು. ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ರುದ್ರಪ್ಪ ಲಮಾಣಿ, ಹೆಸ್ಕಾಂ ಅಧ್ಯಕ್ಷ ಅಜೀಮ್‌ಪೀರ್ ಖಾದ್ರಿ, ಇತರರು ಭಾಗವಹಿಸುವರು. ಶೇಖರ ಭಜಂತ್ರಿ ಉಪನ್ಯಾಸ ನೀಡುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net