ಹಾನಗಲ್ಲ ಗ್ಯಾಂಗ್ ರೇಪ್ ಪ್ರಕರಣ; ಇನ್ಸ್‌ಪೆಕ್ಟರ್ ಶ್ರೀಧರ, ಪೇದೆ ಇಲಿಯಾಸ್ ಅಮಾನತು

Suspended
Published on

ಹಾವೇರಿ: ಹಾನಗಲ್ಲ ಗ್ಯಾಂಗ್ ರೇಪ್ ಪ್ರಕರಣ ನಿರ್ವಹಣೆಯಲ್ಲಿ ಲೋಪ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹಾನಗಲ್ಲ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಶ್ರೀಧರ ಹಾಗೂ ಕಾನ್‌ಸ್ಟೆಬಲ್ ಇಲಿಯಾಸ್ ಶೇಠ್‌ಸನದಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಆದೇಶಿಸಿದ್ದಾರೆ.
ಪ್ರಕರಣ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಎಸ್‌ಪಿ ಅಂಶುಕುಮಾರ ಅವರು ಅಮಾನತು ಮಾಡಿದ್ದಾರೆ ಎಂದು ಎಎಸ್‌ಪಿ ಸಿ.ಗೋಪಾಲ ‘ವಿಜಯವಾಣಿ’ಗೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net