ಕೊಪ್ಪರಸಿಕೊಪ್ಪದಲ್ಲಿ ಜನಸ್ಪಂದನ ಸೆ.25ರಂದು

Published on

ಹಾನಗಲ್ಲ: ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆವರಣದಲ್ಲಿ ಸೆ.25ರಂದು ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹಾನಗಲ್ಲ ಶಾಸಕರ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಕೌಂಟರ್‌ಗಳಲ್ಲಿ ಸಾರ್ವಜನಿಕ ಕುಂದುಕೊರತೆ ನಿವಾರಣೆ ವ್ಯವಸ್ಥೆ (ಐಪಿಜಿಆರ್‌ಎಸ್) ತಂತ್ರಾಂಶದಲ್ಲಿ ದಾಖಲಿಸಿಕೊಂಡು, ಸ್ವೀಕೃತಿ ಪಡೆದುಕೊಳ್ಳಬೇಕು. ಸ್ವೀಕೃತಿಗೊಂಡ ಅರ್ಜಿಗಳನ್ನು ಪರಿಶೀಲಿಸಿ ಕುಂದುಕೊರತೆಗಳಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net