ಕೊಂದುಕೊರತೆ ಸಭೆ 20ರಂದು

Published on

ಹಾವೇರಿ: ಹಾನಗಲ್ಲ ತಾಲೂಕಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಲ್ಲಿರುವ ಕುಂದು ಕೊರತೆಗಳ ಹಾಗೂ ಪರಿಹಾರದ ಕುರಿತು ಚರ್ಚಿಸಲು ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಆ.20ರಂದು ಬೆಳಗ್ಗೆ 11 ಗಂಟೆಗೆ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ.

ಸಭೆಯಲ್ಲಿ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ದಲಿತ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಬಗ್ಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಹಸೀಲ್ದಾರ ಕಚೇರಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net