ಹಾನಗಲ್ಲಗೆ ಏ.24ರಂದು ರಾಹುಲ್ ಗಾಂಧಿ

Rahul Gandhi
Published on

ಹಾವೇರಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಚುನಾವಣೆ ಪ್ರಚಾರಾರ್ಥವಾಗಿ ಏ.24ರಂದು ಹಾನಗಲ್ಲಗೆ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಶ್ರೀನಿವಾಸ ಮಾನೆ ಪರವಾಗಿ ನಡೆಯಲಿರುವ ರೋಡ್ ಶೋನಲ್ಲಿ ರಾಹುಲ್ ಭಾಗವಹಿಸಲಿದ್ದಾರೆ.
ಹಾನಗಲ್ಲ ಪಟ್ಟಣದಲ್ಲಿ ಸಂಜೆ 5 ಗಂಟೆಗೆ ಆರಂಭವಾಗಲಿರುವ ರೋಡ್ ಶೋನಲ್ಲಿ ರಾಹುಲ್ ಗಾಂಧಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೇರಿದಂತೆ ಇತರ ನಾಯಕರು ಪಾಲ್ಗೊಳ್ಳಲಿದ್ದಾರೆ. ಮಾನೆ ಪರ ಮತಯಾಚನೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net