ಹಾನಗಲ್ಲ ಶ್ರೀ ಕುಮಾರಸ್ವಾಮೀಜಿ ಅವರ 157ನೇ ಜಯಂತಿ ಅಂಗವಾಗಿ ಮೆರವಣಿಗೆ

5 HVR 9
Published on

ಹಾವೇರಿ: ಅಖಿಲ ಭಾರತ ವೀರಶೈವ ಮಹಾಸಭಾ ಸಂಸ್ಥಾಪಕರು ಹಾಗೂ ಶಿವಯೋಗಿ ಮಂದಿರ ಸಂಸ್ಥಾಪಕರಾದ ಹಾನಗಲ್ಲ ಶ್ರೀ ಕುಮಾರಸ್ವಾಮೀಜಿ ಅವರ 157ನೇ ಜಯಂತಿ ಅಂಗವಾಗಿ ಹಾವೇರಿ ನಗರದ ವೀರಭದ್ರೇಶ್ವರ ದೇಗುಲದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶ್ರೀಗಳ ಭಾವಚಿತ್ರದ ಮೆರವಣಿಗೆಗೆ ಹುಕ್ಕೇರಿ ಮಠಾಧ್ಯಕ್ಷರಾದ ಶ್ರೀ ಸದಾಶಿವ ಸ್ವಾಮೀಜಿ ಚಾಲನೆ ನೀಡಿದರು. ಹೊಸಮಠದ ಶ್ರೀ ಬಸವ ಶಾಂತಲಿಂಗ ಸ್ವಾಮೀಜಿ, ಅಕ್ಕಿಆಲೂರಿನ ಶ್ರೀ ಶಿವಬಸವ ಸ್ವಾಮೀಜಿ, ಕೂಡಲದ ಶ್ರೀಗಳು, ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಎಸ್.ಕೋರಿಶೆಟ್ಟರ, ಶಿವಪ್ಪ ಶಿರೂರ, ಕೂಡ್ಲಪ್ಪನವರ, ಇತರ ಭಕ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net