ಹನುಮನಮಟ್ಟಿಯಲ್ಲಿ ಜೇನು ಸಾಕಾಣಿಕೆ ತರಬೇತಿ

Honey bees training
Published on

ಹಾವೇರಿ: ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜೂನ್‌ನಲ್ಲಿ 26 ದಿನಗಳ ಜೇನು ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಊಟ ಹಾಗೂ ವಸತಿ ವ್ಯವಸ್ಥೆ ಇರುತ್ತದೆ. ಕೇವಲ 20 ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.
ಆಸಕ್ತರು ತಮ್ಮ ಆಧಾರ್ ಕಾರ್ಡ್ ಹಾಗೂ ಪಾಸ್‌ಪೋರ್ಟ್ ಭಾವಚಿತ್ರದೊಂದಿಗೆ ಮೇ 31ರೊಳಗೆ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಹೆಸರನ್ನು ನೊಂದಾಯಿಸಲು ಕೋರಲಾಗಿದೆ. ತರಬೇತಿಯ ನಂತರ ಶಿಬಿರಾರ್ಥಿಗಳಿಗೆ ತರಬೇತಿ ಪ್ರಮಾಣ ಪತ್ರ ನೀಡಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net