ಹಾವೇರಿ: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಡಿ.2ರಂದು ಬೆಳಗ್ಗೆ 10 ಗಂಟೆಗೆ ನಗರದ ಹೊಸಮಠದ ಬಸವೇಶ್ವರ ಸಮುದಾಯ ಭವನದಲ್ಲಿ ಜರುಗಲಿದೆ.
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಉದ್ಘಾಟನೆ ನೆರವೇರಿಸಲಿದ್ದು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಆರ್.ಮುತಾಲಿಕ್‌ದೇಸಾಯಿ ಉಪಸ್ಥಿತಿಯಲ್ಲಿ ಜಿಲ್ಲಾ ವಿಕಲಚೇತನರ ಸಂಘದ ಅಧ್ಯಕ್ಷ ಪುಟ್ಟಪ್ಪ ಜಲದಿ ಜ್ಯೋತಿ ಬೆಳಗಿಸುವರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಆಶು ನದಾಫ, ಜಿಲ್ಲಾ ವಿಕಲಚೇತನರ ಸಂಘದ ಉಪಾಧ್ಯಕ್ಷ ಮೌನೇಶ ಬಡಿಗೇರ, ಹಾವೇರಿ ಜಿಲ್ಲಾ ವಿಕಲಚೇತನರ ಮಕ್ಕಳ ವಸತಿ ಶಾಲೆಗಳ ಸ್ವಯಂ ಸೇವಾ ಸಂಘದ ಅಧ್ಯಕ್ಷ ಎಚ್.ಆರ್.ಶಿವಕುಮಾರ, ಜಿಲ್ಲಾ ವಿಕಲಚೇತನರ ವಿಶೇಷ ಶಾಲಾ ನೌಕರರ ಸಂಘದ ಅಧ್ಯಕ್ಷ ಎಂ.ಕೆ.ಪಾಟೀಲ, ಕರ್ನಾಟಕ ಅಂಗವಿಕಲರ ಕ್ಷೇಮಾಭಿವೃದ್ಧಿ ರಾಜ್ಯಾಧ್ಯಕ್ಷ ಮಹದೇವ ಎಚ್.ಡಿ., ಹಾವೇರಿ ಸಕ್ಷಮ ಅಧ್ಯಕ್ಷೆ ಪ್ರಭಾವತಿ ತಿಳವಳ್ಳಿ ಭಾಗವಹಿಸಲಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್.ಎನ್.ದಿಳ್ಳೆಪ್ಪನವರ ವಿಕಲಚೇತನರ ಕಾನೂನು ನೆರವು/ಹಕ್ಕುಗಳ ಅಧಿನಿಯಮ-2016ರ ಕುರಿತು ಉಪನ್ಯಾಸ ನೀಡಲಿದ್ದಾರೆ.