ವಿಕಲಚೇತನರ ಬೈಕ್ ಜಾಥಾ ಮೇ 3ರಂದು

Published on

ಹಾವೇರಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಮತದಾನ ಜಾಗೃತಿಗಾಗಿ ಮೇ 3ರಂದು ಬೆಳಗ್ಗೆ 10 ಗಂಟೆಗೆ ನಗರದ ಶ್ರೀ ಪುರಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾ ಮಟ್ಟದ ವಿಕಲಚೇತನರ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಆಶು ನದಾಫ್ ತಿಳಿಸಿದ್ದಾರೆ.
ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಎಲ್ಲ ಮತಗಟ್ಟೆಗಳಲ್ಲಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಶೇ.ನೂರರಷ್ಟು ಮತದಾನ ಮಾಡಲು ಮತದಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ವಿಕಲಚೇತನರು ತಮ್ಮ ಯಂತ್ರಚಾಲಿತ ತ್ರಿಚಕ್ರ ವಾಹನಗಳೊಂದಿಗೆ ಈ ಬೈಕ್ ಜಾಥಾದಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net