

ಹಾವೇರಿ: ತಾಲೂಕಿನ ಹಂದಿಗನೂರು ಗ್ರಾಮದ ಆಡಳಿತ ಅಧಿಕಾರಿ (ವಿಎ), ಕರ್ಜಗಿ ಗ್ರಾಮದ ನಿವಾಸಿ ಬಸವರಾಜ ನಂದಿ (52) ಹೃದಯಾಘಾತದಿಂದ ಶುಕ್ರವಾರ ಮೃತಪಟ್ಟಿದ್ದಾರೆ.
ನಗರದ ಗಾಂಧೀ ಭವನದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಬಸವರಾಜ ಭಾಗವಹಿಸಿದ್ದರು. ಬೆನ್ನು ನೋವು ಎಂದು ಸಿಬ್ಬಂದಿಯೊಬ್ಬರ ಬೈಕ್‌ನಲ್ಲಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಹೃದಾಯಘಾತ ಆಗಿತ್ತು. ಕೂಡಲೇ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಂತರ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹ ರವಾನಿಸಲಾಯಿತು. ಸ್ಥಳಕ್ಕೆ ತಹಸೀಲ್ದಾರ್ ಶರಣಮ್ಮ, ಹಿರಿಯ ಅಧಿಕಾರಿಗಳು ಬೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.