ಗುಡುಗು, ಸಿಡಿಲು ಸಹಿತ ಸುರಿದ ಮಳೆ; ರೈತರಲ್ಲಿ ಆತಂಕ

Published on

ಹಾವೇರಿ: ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಜಿಲ್ಲೆಯಲ್ಲಿ ಬಿಸಿಲಿನ ವಾತಾವಣದಿಂದ ಕೂಡಿತ್ತು. ಸಂಜೆ ಏಕಾಏಕಿ ಮೋಡ ಕವಿದು ಗುಡುಗು, ಸಿಡಿಲು ಸಹಿತ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಮೆಕ್ಕೆಜೋಳ, ಸೋಯಾಬಿನ್, ಶೇಂಗಾ ಸೇರಿದಂತೆ ಇತರ ಬೆಳೆಗಳು ಕಟಾವು ಹಂತದಲ್ಲಿದ್ದು, ಹಲವು ರೈತರು ಕಟಾವು ಮಾಡಿ ಒಣಗಿಸಲು ಮುಂದಾಗಿದ್ದರು. ಏಕಾಏಕಿ ಸುರಿದ ಮಳಿಯಿಂದಾಗಿ ಸಂಕಷ್ಟ ಅನುಭಿವಿಸಿದರು. ಮತ್ತೊಂದೆಡೆ ಹಿಂಗಾರು ಬಿತ್ತನೆಗೆ ಸಿದ್ಧತೆಯಲ್ಲಿದ್ದ ರೈತರಿಗೆ ಮಳೆ ವರದಾನವಾಗಿದ್ದು, ಜೋಳ, ಕಡಲೆ, ಗೋವಿನಜೋಳ, ಇತರ ಬೆಳೆಗಳ ಬಿತ್ತನೆಗೆ ಮುಂದಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net