ಹೆಗ್ಗೇರಿ ಕೆರೆ ಪರಿಶೀಲಿಸಿದ ಸಚಿವ ಪಾಟೀಲ

Shivanand Patil
Published on

ಹಾವೇರಿ: ನಗರಕ್ಕೆ ಕುಡಿಯುವ ನೀರು ಪೂರೈಕೆಗಾಗಿ ಬಳಕೆ ಮಾಡಿಕೊಳ್ಳಲು ಉದ್ದೇಶಿಸಿರುವ ಹೆಗ್ಗೇರಿ ಕೆರೆಯ ಪ್ರದೇಶಕ್ಕೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೆಗ್ಗೇರಿ ಕೆರೆ ಪ್ರದೇಶದಲ್ಲಿ ಪೊಲೀಸ್ ವಸತಿ ಗೃಹದ ಕಲುಷಿತ ನೀರು ಕೆರೆಗೆ ಸೇರುತ್ತಿರುವ ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಪರಿಸರ ಅಧಿಕಾರಿಗಳ ತಂಡಕ್ಕೆ ಖುದ್ದಾಗಿ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಕಳೆದ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದರು. ಸಿಎಂ ಆಗಮನದ ಬೆನ್ನಲ್ಲೇ ತಾವೇ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕರಾದ ಯು.ಬಿ.ಬಣಕಾರ, ಪ್ರಕಾಶ ಕೋಳಿವಾಡ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ ಗುಣಾರೆ, ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net