ಹಾವೇರಿ: ಜೂ.21ರಂದು ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಹಾವೇರಿಯ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಕಚೇರಿಯಲ್ಲಿ ಗ್ರಾಹಕರ ಸಂವಾದ ಸಭೆ ನಡೆಯಲಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.