ಸಿ.ಟಿ.ರವಿ ಅವರನ್ನು ಎಂಎಲ್‌ಸಿ ಸ್ಥಾನದಿಂದ ತೆಗೆದು ಹಾಕಬೇಕು; ಹೆಸ್ಕಾಂ ಅಧ್ಯಕ್ಷ ಅಜೀಮಪೀರ್ ಖಾದ್ರಿ

Published on

ಹಾವೇರಿ: ಬಿಜೆಪಿಯವರು ಸಂವಿಧಾನ ಬದಲಾಯಿಸುವ ಹೇಳಿಕೆ ಕೊಟ್ಟಿದ್ದಾರೆ. ಸಂವಿಧಾನದ ಮೇಲೆ ಅವರಿಗೆ ವಿಶ್ವಾಸವಿಲ್ಲ. ಬಿಜೆಪಿ ಎಂದರೆ ದೇಶ ಒಡೆಯುವ ಪಕ್ಷ ಎಂದು ಹೆಸ್ಕಾಂ ಅಧ್ಯಕ್ಷ ಅಜೀಮಪೀರ್ ಖಾದ್ರಿ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ದಾರಿ ತಪ್ಪಿಸುವ ಕೆಲಸ ಆಗಿದೆ. ಗೃಹ ಸಚಿವರಾಗಲು ಅಮಿತ ಶಾ ಅವರಿಗೆ ಯೋಗ್ಯತೆ ಇಲ್ಲ. ಅಂಬೇಡ್ಕರ್ ಅವರ ಕುರಿತು ಕೀಳು ಮಟ್ಟದ ಮಾತು ಖಂಡನೀಯ. ಅವರಂತೆ ರಾಜ್ಯದಲ್ಲಿ ಸಿ.ಟಿ.ರವಿ ಯಾವಾಗಲೂ ಯಡವಟ್ಟು ಮಾಡುತ್ತಾರೆ. ರಾಜ್ಯದಲ್ಲಿ ಬಿಜೆಪಿ ಅವರಿಗೆ ಭವಿಷ್ಯ ಇಲ್ಲ ಎಂಬುದು ಗೊತ್ತಾಗಿದೆ. ಇದು ಅವರಿಗೆ ನುಂಗಲಾರದ ತುತ್ತಾಗಿದೆ. ಅದಕ್ಕಾಗಿ ಹೀಗೆ ಮಾಡುತ್ತಿದ್ದಾರೆ. ಸಿ.ಟಿ.ರವಿ ಅವರನ್ನು ಎಂಎಲ್‌ಸಿ ಸ್ಥಾನದಿಂದ ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ನೀರಲಗಿ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಅಂಬೇಡ್ಕರ್ ಅವರಿಗೆ ಅವಮಾನ ಮಾಡುವುದು ಭಾರತ ಮಾತೆಗೆ ಅವಮಾನ ಮಾಡಿದಂತೆಯೇ. ತಕ್ಷಣ ಮೋದಿ ಅವರು ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕು. ಬೆಳಗಾವಿಯಲ್ಲಿ ನಡೆದ ಹೇಯ ಕೃತ್ಯದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯತ್ವ ಸ್ಥಾನವನ್ನು ರಾಜ್ಯಪಾಲರು ರದ್ದುಪಡಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net