ನ.24ರಿಂದ 26ರವರೆಗೆ ಹೆಸ್ಕಾಂ ಆನ್‌ಲೈನ್ ಸೇವೆ ಅಲಭ್ಯ

Published on

ಹಾವೇರಿ: ಜಿಲ್ಲಾ ವ್ಯಾಪ್ತಿಯ ಪಟ್ಟಣ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಮಾಹಿತಿ ತಂತ್ರಜ್ಞಾನ ಸೇವೆ ತಂತ್ರಾಂಶಗಳು ಹಾಗೂ ಹಾರ್ಡವೇರ್‌ಗಳನ್ನು ಉನ್ನತೀಕರಿಸುತ್ತಿರುವ ಹಿನ್ನೆಲೆಯಲ್ಲಿ ನ.24ರಿಂದ ನ.26ರವರೆಗೆ ಮೂರು ದಿನಗಳ ಕಾಲ ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆ ಲಭ್ಯವಿರುವುದಿಲ್ಲ ಎಂದು ಹೆಸ್ಕಾಂನ ಹಾವೇರಿ ಕಾರ್ಯ ಮತ್ತು ಪಾಲನಾ ವೃತ್ತ ಅಧೀಕ್ಷಕ ಇಂಜನೀಯರ್ ನಾಗಪ್ಪ.ಎಸ್. ಎಚ್. ತಿಳಿಸಿದ್ದಾರೆ.
ಈ ಅವಧಿಯಲ್ಲಿ ಆನ್‌ಲೈನ್ ಸೇವೆಗಳಾದ ಹೊಸ ವಿದ್ಯುತ್ ಸಂಪರ್ಕ, ಹೆಸರು, ಲೋಡ್ ಬದಲಾವಣೆ, ನಗದು ಪಾವತಿ, ಆನ್‌ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಗಳು ಹಾಗೂ ಇತರ ಸೇವೆಗಳು ಅಭ್ಯವಿರುವುದಿಲ್ಲ. ಆನ್‌ಲೈನ್ ಸೇವೆಗಳ ಅಲಭ್ಯತೆಯನ್ನು ಗಮನಿಸಿ ಗ್ರಾಹಕರು ಹಾಗೂ ಗುತ್ತಿಗೆದಾರರು ತಮ್ಮ ಅವಶ್ಯಕತೆಗಳನ್ನು ಮುಂಚಿತವಾಗಿ ಮಾಡಿಕೊಳ್ಳಬೇಕು. ಈ ಅವಧಿಯಲ್ಲಿ ವಿದ್ಯುತ್ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಹಾಗಾಗಿ, ಗ್ರಾಹಕರು ಆತಂಕಪಡಬೇಕಾಗಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net