ಹಾವೇರಿ: ಬಸವನಕಟ್ಟಿ 110 ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆ.16ರಂದು ತುರ್ತು ನಿರ್ವಹಣಾ ಕಾಮಗಾರಿ ಇರುವ ಕಾರಣ ಅಂದು ಈ ಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರ್‌ಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಬಸವನಕಟ್ಟಿ, ಸೋಮನಕಟ್ಟಿ, ಮಾಚಾಪುರ, ಬೂದಗಟ್ಟಿ, ಕನವಳ್ಳಿ, ಹನುಮನಹಳ್ಳಿ, ಕಾಟೇನಹಳ್ಳಿ, ಅಗಡಿ, ತಿಮ್ಮೇನಹಳ್ಳಿ, ಮಾಳಾಪುರ, ಗಾಂಧಿಪುರ, ಜಾನಕೊಪ್ಪ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.