ಹೆಸ್ಕಾಂ ಅಧ್ಯಕ್ಷ ಖಾದ್ರಿ ಜಿಲ್ಲಾ ಪ್ರವಾಸ

Ajeempeer Khadri 1
Published on

ಹಾವೇರಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ)ನ ಅಧ್ಯಕ್ಷ ಸೈಯದ್ ಅಜೀಮಪೀರ್ ಖಾದ್ರಿ ಫೆ.4ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಬೆಳಗ್ಗೆ 10.30ಕ್ಕೆ ನಗರದ ಹೆಸ್ಕಾಂ ವೃತ್ತ ಕಚೇರಿ ಸಭಾಂಗಣದಲ್ಲಿ ಹೆಸ್ಕಾಂ ಹಾವೇರಿ ವೃತ್ತದ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಆಡಿಟ್, ಕಾಮಗಾರಿ ಮತ್ತು ಕಂದಾಯ ವಸೂಲಾತಿ ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net