ಪ್ರೌಢಶಾಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ ಜ.30ರಂದು

Published on

ಹಾವೇರಿ: ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಜಿಲ್ಲಾ ಘಟಕದ ವತಿಯಿಂದ ಜ.30ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಗುರುಭವನದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮ್ಮೇಳನ ಸರ್ವೋದಯ ದಿನಾಚರಣೆ ಹಾಗೂ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 8.30ಕ್ಕೆ ವೀರಭದ್ರೇಶ್ವರ ದೇವಸ್ಥಾನದಿಂದ ಮೆವರಣಿಗೆ ಆರಂಭವಾಗಿ ಜಿಲ್ಲಾ ಗುರುಭವನದವರೆಗೆ ಸಾಗಲಿದೆ. ಬೆಳಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸಮಾರಂಭ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಮತ್ತಿತರ ಗಣ್ಯರು ಭಾಗವಹಿಸುವರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡುವರು. ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕುರಿತು ಧಾರವಾಡದ ಹಿರೆಮಲ್ಲೂರು ಈಶ್ವರನ್, ಪ.ಪೂ ಕಾಲೇಜಿನ ಪ್ರಾಚಾರ್ಯ ಶಶಿಧರ ತೋಡ್ಕರ್ ಉಪನ್ಯಾಸ ನೀಡುವರು ಶಿಕ್ಷಕರಿಗೆ ಒಒಡಿ ಸೌಲಭ್ಯ ನೀಡಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜನ ಶಾಂತಗಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net