ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ

Published on

ಹಾವೇರಿ: ರಾಜ್ಯದಲ್ಲಿ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು ಮತ್ತು ರೈತರಿಗೆ ಸುಲಭವಾಗಿ ಕೃಷಿ ಯಂತ್ರೋಪಕರಣಗಳು ದೊರೆಯುವಂತೆ ಮಾಡಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಅರ್ಹ ಕೃಷಿ ಯಂತ್ರಧಾರೆ ಕೇಂದ್ರಗಳು, ನೋಂದಾಯಿತ ಸಂಘ-ಸಂಸ್ಥೆಗಳು ಹಾಗೂ ವೈಯಕ್ತಿಕ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಕಾರಿಡಾರ್ ಮಾದರಿಯಲ್ಲಿ ಸ್ಥಾಪಿಸಲಾಗುತ್ತಿದ್ದು, ಈ ಕಾರಿಡಾರ್‌ನಲ್ಲಿ ಸಂಚರಿಸಿ ಯಂತ್ರೋಪಕರಣಗಳು ಕಾರ್ಯ ನಿರ್ವಹಿಸಬಹುದಾಗಿರುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50ರಂತೆ, ಪ.ಜಾ/ಪ.ಪಂ ವರ್ಗದ ರೈತರಿಗೆ ಗರಿಷ್ಠ ಶೇ.70ರಂತೆ, ಹಾಗೂ ಸಂಘ ಸಂಸ್ಥೆಗಳಿಗೆ ಗರಿಷ್ಠ ಶೇ.70ರಂತೆ ಸಹಾಯಧನ ನೀಡಲಾಗುವುದು.
ವಿವಿಧ ರೀತಿಯ ಹಬ್‌ಗಳಿಗೆ ನಿಗದಿಪಡಿಸಿದ ಗರಿಷ್ಠ ಸಹಾಯಧನ ಮೊತ್ತಕ್ಕೆ ಮಿತಿಗೊಳಿಸಿ ಅಗತ್ಯವಿರುವ ಯಂತ್ರೋಪಕರಣಗಳನ್ನು ದಾಸ್ತಾನಿಕರಿಸಲು ಗರಿಷ್ಠ ಮೊತ್ತ 100 ಲಕ್ಷ ರೂ. ಸಹಾಯಧನ ನೀಡಲಾಗುವುದು. ಕೃಷಿ ಯಂತ್ರಧಾರೆ ಕೇಂದ್ರಗಳು, ನೋಂದಾಯಿತ ಸಂಘ-ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದ್ದು ಹಾಗೂ ವೈಯಕ್ತಿಕ ಅರ್ಜಿದಾರರು ಶುಗರ್ ಕೇನ್ ಹಾರ್ವೆಸ್ಟರ್ ಹಬ್‌ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಫೆ.15ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯಿತಿ ಜಿಲ್ಲಾ ಉಪಕರಣ ಸಮಿತಿ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net