ಹಿರೇಕೆರೂರ ತಹಸೀಲ್ದಾರ್ ಕಚೇರಿಗೆ ಡಿಸಿ ಭೇಟಿ

21 HVR 3
Published on

ಹಾವೇರಿ: ಹಿರೇಕೆರೂರ ತಹಸೀಲ್ದಾರ್ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಕಂದಾಯ ದಾಖಲೆಗಳನ್ನು ಪರಿಶೀಲಿಸಿದರು.

ಕಂದಾಯ ದಾಖಲೆಗಳ ಡಿಜಟಿಲೀಕರಣವನ್ನು ವೇಗವಾಗಿ ಮಾಡಬೇಕು ಎಂದು ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು. ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸಹನೆಯಿಂದ ನಡೆದುಕೊಳ್ಳಬೇಕು ಹಾಗೂ ಅವರ ಕುಂದುಕೊರತೆಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net