ಹಾವೇರಿ: ನಗರದ ಟಿಎಚ್‌ಒ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ವತಿಯಿಂದ ಆಯೋಜಿಸಿದ್ದ ಎಚ್.ಐ.ವಿ/ ಏಡ್ಸ್ ಜನಜಾಗೃತಿ ಬೈಕ್ ರ‌್ಯಾಲಿಗೆ ಆರೋಗ್ಯ ಇಲಾಖೆಯ ಜಿಲ್ಲಾ ನೋಡಲ್ ಅಧಿಕಾರಿ ಡಾ.ವೀರಭದ್ರಯ್ಯ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ, ಜಿಲ್ಲಾ ಶಸ್ತ್ರಚಿಕಿತ್ಸ ಡಾ.ಪಿ.ಆರ್.ಹಾವನೂರ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಡಾ.ನಿಲೇಶ, ಇತರರಿದ್ದರು.