ತೋಟಗಾರಿಕಾ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Horticulter
Published on

ಹಾವೇರಿ: ಗದಗ ಜಿಲ್ಲೆಯ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿಗೆ ಒಂಭತ್ತು ತಿಂಗಳ ಅವಧಿಯ ತೋಟಗಾರಿಕಾ ತರಬೇತಿ ಪಡೆಯಲು ಆಸಕ್ತ ರೈತ ಕುಟುಂಬದ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ತಂದೆ/ತಾಯಿ ಅಥವಾ ಪಾಲಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಪೂರಕ ದಾಖಲೆಯಾಗಿ ಕಂದಾಯ ಇಲಾಖೆಯ ದೃಢೀಕರಣ ಪತ್ರ ಸಲ್ಲಿಸಬೇಕು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಜೂನ್ 3ರ ಸಂಜೆ 5.30ರೊಳಗಾಗಿ ಸಲ್ಲಿಸಬೇಕು. ಜೂನ್ 6ರಂದು ಬೆಳಗ್ಗೆ 11 ಗಂಟೆಗೆ ಹಾವೇರಿ ದೇವಗಿರಿಯ ಜಿಲ್ಲಾಡಳಿತ ಭವನದ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಜೂನ್ 10ರಂದು ತರಬೇತಿಗೆ ಆಯ್ಕೆಯಾದವರ ಪಟ್ಟಿ ಪ್ರಕಟಿಸಲಾಗುವುದು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಕನಿಷ್ಟ 18 ವರ್ಷ, ಗರಿಷ್ಠ 33, ಇತರ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷದೊಳಗಿರಬೇಕು ಹಾಗೂ ಮಾಜಿ ಸೈನಿಕರು 33 ವರ್ಷದಿಂದ 65 ವರ್ಷದೊಳಗಿರಬೇಕು. ಸಾಮಾನ್ಯ ಅಭ್ಯರ್ಥಿಗೆ 30 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು 15 ರೂ. ಪೋಸ್ಟಲ್ ಆರ್ಡರ್ ಅಥವಾ ಡಿಡಿಯನ್ನು ಅರ್ಜಿ ಶುಲ್ಕವಾಗಿ ಸಲ್ಲಿಸಬೇಕು. ಅರ್ಜಿ ನಮೂನೆ ಇಲಾಖೆ ವೆಬ್‌ಸೈಟ್ https://horticulturedir.karnataka.gov.in ನಲ್ಲಿ ಪಡೆದುಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹಾವೇರಿ ಹಾಗೂ ತಾಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕ ಪ್ರದೀಪ ಎಲ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net