ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಂಸ್ಕೃತಿ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಐದರಿಂದ 18 ವರ್ಷದೊಳಗಿನ ಮಕ್ಕಳು ಅರ್ಜಿ ಸಲ್ಲಿಸಬಹುದು. ಒಂದು ಕ್ಷೇತ್ರದಲ್ಲಿ ಇಬ್ಬರಂತೆ ಒಟ್ಟು ಎಂಟು ಮಕ್ಕಳನ್ನು ಆಯ್ಕೆ ಮಾಡಿ ತಲಾ 10 ಸಾವಿರ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ.
ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾವೇರಿ, ಈ ಕಚೇರಿಯಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಸೆ.30ರೊಳಗಾಗಿ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದಾರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net